ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಭಾರಿ ಮಳೆಗೆ ಪಡು ಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ಲೈಟ್ ಹೌಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ. ಭಾರಿ ಮಳೆಯಿಂದ ಈ ಭಾಗದಲ್ಲಿ ಗದ್ದೆಗಳಿಗೆ ನೀರು ನುಗ್ಗಿ ಕೃಷಿ ಹಾನಿ ಸಂಭವಿಸಿದೆ.
ಮಳೆಗೆ ಪಡುಪಣಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡು ಬಳಿಯ ದಿನೇಶ್ ಎಂಬವರ ಮನೆಗೆ ನೀರು ನುಗ್ಗಿದೆ.
ಭಾರೀ ಮಳೆಗೆ ತಾಲ್ಲೂಕು ವ್ಯಾಪ್ತಿಯ ಕಿಲ್ಪಾಡಿ, ಕುಬೆವೂರು, ಮಾನಂಪಾಡಿ, ಅತಿಕಾರಿ ಬೆಟ್ಟು ನಲ್ಲಿ ಕೃತಕ ನೆರೆ ಉಂಟಾಗಿದ್ದು ನೆರೆಪೀಡಿತ ಪ್ರದೇಶಗಳಾದ ಪಂಜ ಕಿಲೆಂಜೂರು, ಅತ್ತೂರು ಪ್ರದೇಶಗಳಲ್ಲಿ ನಂದಿನಿ ನೀರಿನ ಮಟ್ಟ ಏರುತ್ತಿದ್ದು ನದಿ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
Kshetra Samachara
03/08/2022 07:54 am