ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪದ್ಮನೂರು ಬಳಿ ಅಪಾಯಕಾರಿ ಹೊಂಡ ಸೃಷ್ಟಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿದೆ.
ಹೆದ್ದಾರಿ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಹೊಂಡಗಳು ಉಂಟಾಗಿದ್ದು ಈ ಬಗ್ಗೆ ಅನೇಕ ಬಾರಿ ಲೋಕೋಪಯೋಗಿ ಇಲಾಖೆಯ ಗಮನಕ್ಕೆ ತಂದಿದ್ದರೂ ಇದುವರೆಗೂ ದುರಸ್ತಿಯಾಗಿಲ್ಲ. ಕಳೆದ ತಿಂಗಳ ಹಿಂದೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವತಿಯಿಂದ ಮುಖ್ಯಾಧಿಕಾರಿ ಸಾಯಿಷ್ ಚೌಟ ನೇತೃತ್ವದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಹೊಂಡ ಮುಚ್ಚಲಾಗಿತ್ತು. ಆದರೆ ಭಾರಿ ಮಳೆಗೆ ಮತ್ತೆ ಹೊಂಡ ಬಾಯ್ತೆರೆದು ನಿಂತಿದ್ದು ಬಲಿಗಾಗಿ ಕಾಯುತ್ತಿದೆ.
ದಿನದ ಹಿಂದೆ ಬೈಕ್ ಸವಾರ ನೊಬ್ಬ ಹೆದ್ದಾರಿಯ ಹೊಂಡ ದಲ್ಲಿ ಬಿದ್ದು ತೀವ್ರ ಗಾಯಗೊಂಡಿದ್ದು ಮುಲ್ಕಿ ಠಾಣಾಧಿಕಾರಿ ಮಾನವೀಯತೆ ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ರೀತಿ ಅನೇಕ ಅಪಘಾತಗಳು ಈ ಭಾಗದಲ್ಲಿ ಸಂಭವಿಸಿದ್ದು ಕೂಡಲೇ ಲೋಕೋಪಯೋಗಿ ಇಲಾಖೆ ಎಚ್ಚೆತ್ತು ತಾತ್ಕಾಲಿಕ ನೆಲೆಯಲ್ಲಿ ರಸ್ತೆ ದುರಸ್ತಿ ಮಾಡಿಸಬೇಕು ಎಂದು ಸ್ಥಳೀಯ ನಾಗರಿಕ ಸಂತೋಷ್ ಒತ್ತಾಯಿಸಿದ್ದಾರೆ.
Kshetra Samachara
06/08/2022 07:06 pm