ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ಸುಭಾಷ್ ಶೆಟ್ಟಿ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಫಲಾನುಭವಿಗಳ ಆಯ್ಕೆ, ಮತ್ತಿತರ ಯೋಜನೆಗಳ ಬಗ್ಗೆ ತೀವ್ರ ಚರ್ಚೆ ನಡೆಯಿತು. ಸಭೆಯಲ್ಲಿ ನಗರ ಪಂಚಾಯತಿ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ 2023 24ನೇ ಎಸ್ ಎಫ್ ಸಿ ಮನೆ ರಿಪೇರಿ ಹಾಗೂ ವಿದ್ಯಾರ್ಥಿ ವೇತನ ಬಗ್ಗೆ ಫಲಾನುಭವಿಗಳ ಆಯ್ಕೆ ಕುರಿತಂತೆ ಅನೇಕ ಅರ್ಜಿಗಳು ಬಂದಿದ್ದು ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಹಾಗೂ ಮಂಜುನಾಥ್ ಕಂಬಾರ ಮಾತನಾಡಿ ಕಳೆದ ಬಾರಿ ಫಲಾನುಭವಿಗಳ ಆಯ್ಕೆಯಲ್ಲಿ ಗೊಂದಲ ಉಂಟಾಗಿದ್ದು ಈ ಬಾರಿ ಸರಿಯಾದ ರೀತಿಯಲ್ಲಿ ಫಲಾನುಭವಿಗಳ ಆಯ್ಕೆ ನಡೆಯಬೇಕು ಎಂದರು.
ನಗರ ಪಂಚಾಯತ್ ಉಪಾಧ್ಯಕ್ಷ ಸತೀಶ್ ಅಂಚನ್ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮಿ, ಆರೋಗ್ಯ ಅಧಿಕಾರಿ ಲಿಲ್ಲಿ ನಾಯರ್ ಮತ್ತಿತರರು ಉಪಸ್ಥಿತರಿದ್ದರು
Kshetra Samachara
07/08/2022 09:49 am