ಮುಲ್ಕಿ: ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಫೇಮಸ್ ಮಹಿಳಾ ಮಂಡಲ 10ನೇ ತೋಕೂರು ಮಾರ್ಗದರ್ಶನದಲ್ಲಿ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ)ತೋಕೂರು, ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ, ಓಂ ಕ್ರಿಕೆಟರ್ಸ್ ಪಾವಂಜೆ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಎಸ್ ಕೋಡಿ ಪದ್ಮಾವತಿ ಲಾನ್ ನಲ್ಲಿ ಚಾಲನೆಯನ್ನು ನೀಡಲಾಯಿತು.
ಫೇಮಸ್ ಯೂತ್ ಕ್ಲಬ್ ಗೌರವಾಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು,
ಮುಲ್ಕಿ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಕಿಲೆಂಜೂರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ "ಪ್ರತೀ ಮನೆ ಮನೆಗಳಲ್ಲೂ ರಾಷ್ಟ್ರಪ್ರೇಮ ಜಾಗೃತಿ ಯಾಗಬೇಕು, ಸ್ವಾತಂತ್ರ್ಯದ ಅಮೃತಮಹೋತ್ವದ ಅಮೃತ ಘಳಿಗೆಗಾಗಿ ದೇಶ ಕಾತರದಿಂದ ಕಾಯುತಿದೆ ಎಂದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರ ಮಂಗಳೂರು ಆಡಳಿತಾಧಿಕಾರಿ ಜಗದೀಶ್, ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಯುವ ಪರಿವರ್ತಕ ಪ್ರೀತೇಶ್, ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಮಂಗಳೂರು ಮಹಾನಗರ, ಬಜ್ಪೆ ಶಾಖೆಯ ಯೋಗ ಬಂಧು ಲೋಕನಾಥ್ ಬಂಗೇರ, ಪಡುಪಣಂಬೂರು ಗ್ರಾ.ಪಂ. ಕಾರ್ಯದರ್ಶಿ ಲೋಕನಾಥ ಭಂಡಾರಿ, ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಅಧ್ಯಕ್ಷ ಶ್ರೀ ಚಂದ್ರಹಾಸ್, ಗಜಾನನ ಸ್ಪೋರ್ಟ್ಸ್ ಕ್ಲಬ್ ತೋಕೂರು ಉಪಾಧ್ಯಕ್ಷ ಸುನಿಲ್ ಶೆಟ್ಟಿಗಾರ್, ಓಂ ಕ್ರಿಕೆಟರ್ಸ್ ಪಾವಂಜೆ ಪ್ರತಿನಿಧಿ ಹರೀಶ್ ಕುಲಾಲ್, ಫೇಮಸ್ ಯೂತ್ ಕ್ಲಬ್ (ರಿ) ತೋಕೂರು ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.
ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ಸ್ವಾಗತಿಸಿದರು ಸದಸ್ಯರಾದ ಮಹಮ್ಮದ್ ಶರೀಫ್ ರವರು ಕಾರ್ಯಕ್ರಮ ನಿರೂಪಿಸಿದರು.
Kshetra Samachara
08/08/2022 11:01 am