ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸರಕಾರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ: ಉಮಾನಾಥ್

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಅಮೃತ್ ಯೋಜನೆಯ ಅನುದಾನದಲ್ಲಿ ದುರಸ್ತಿ ಪಡಿಸಿರುವ ಶಾಲಾ ಕಟ್ಟಡವನ್ನು ಶಾಸಕ ಉಮನಾಥ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ ಸರಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು ಮಕ್ಕಳು ಸದುಪಯೋಗಪಡಿಸಿಕೊಂಡು ಶಾಲೆಗೆ ಕೀರ್ತಿ ತರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನ ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿದ್ದರು.

ಉಪಾಧ್ಯಕ್ಷ ಸತೀಶ್ ಅಂಚನ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಿ, ಸದಸ್ಯರಾದ ಸಂತೋಷ್ ದೇಸುಣಿಗಿ, ಈರಣ್ಣ ಅರಳಗುಂಡಿ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಿಶು ಕುಮಾರ್ ಮುಖ್ಯ ಶಿಕ್ಷಕ ದಿನೇಶ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಹೆಗ್ಡೆ, ಜಿ. ಪಂ ಜೂನಿಯರ್ ಇಂಜಿನಿಯರ್ ಪ್ರಶಾಂತ ಆಳ್ವ ಗುತ್ತಿಗೆದಾರ ಜಗದೀಶ್ ಕೆದೂರು, ಶಾಲಾ ಶಿಕ್ಷಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/08/2022 03:02 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ