ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ:ಹಿಂದುಳಿದ ವರ್ಗದ ಮಕ್ಕಳ ಶಿಕ್ಷಣಕ್ಕೆ ಸರಕಾರ ಒತ್ತು ನೀಡುತ್ತಿದೆ

ಮುಲ್ಕಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್, ಕಿಲ್ಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಡಿಜಿ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಕಿಲ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಪೌಂಡೇಶನ್ ದ.ಕ. ಜಿಲ್ಲಾ ಸಂಯೋಜಕ ರಕ್ಷಿತ್ ಮಾತನಾಡಿ ಹಿಂದುಳಿದ ವರ್ಗದ ಮಕ್ಕಳ ಶಿಕ್ಷಣಕ್ಕೆ ಸರಕಾರ ಒತ್ತು ನೀಡುತ್ತಿದ್ದು ಸದುಪಯೋಗಪಡಿಸಿಕೊಳ್ಳಿ ಎಂದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಶಿಕ್ಷಣಕ್ಕೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯಿತಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಪಂಚಾಯಿತಿ ಸಿಬ್ಬಂದಿ ಸುರೇಶ್ ಧನ್ಯವಾದ ಅರ್ಪಿಸಿದರು.

Edited By : PublicNext Desk
Kshetra Samachara

Kshetra Samachara

23/08/2022 11:43 am

Cinque Terre

1.51 K

Cinque Terre

0

ಸಂಬಂಧಿತ ಸುದ್ದಿ