ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನೇತ್ರದಾನ ಮಾಡಿ ಮಾದರಿಯಾಗಿ: ಡಾ.ಚೂಂತಾರು

ಮಂಗಳೂರು:ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಅಂಗವಾಗಿ 'ನೇತ್ರದಾನ ನೋಂದಣಿ ಅಭಿಯಾನ' ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾದಳದ ಕಚೇರಿಯಲ್ಲಿ ನೇತ್ರದಾನ ನೋಂದಣಿ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಮಾತನಾಡಿ ನಮ್ಮ ರಾಷ್ಟ್ರದಲ್ಲಿ ಸುಮಾರು ಒಂದು ಕೋಟಿ ಜನರು ಅಂಧತ್ವದಿಂದ ಬಳಲುತ್ತಿದ್ದಾರೆ. ಮೃತರಾದ ಬಳಿಕ ಕಣ್ಣುಗಳನ್ನು ದಾನ ಮಾಡುವುದರಿಂದ ಇತರರ ಬಾಳಿಗೆ ಬೆಳಕಾಗುವ ಅವಕಾಶ ನಮಗೆ ದೊರಕುತ್ತದೆ. ಈ ನಿಟ್ಟಿನಲ್ಲಿ ನಾವು ಕಣ್ಣಿದ್ದು ಕುರುಡರಾಗಿ ಬದುಕುವ ಬದಲು ನೇತ್ರದಾನ ಮಾಡಿ ಸಾರ್ಥಕತೆ ಪಡೆಯುವ ದ ಮನಸ್ಸು ಮಾಡಬೇಕು ಎಂದರು.

ಈ ಸಂದರ್ಭ ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿಡಾ|| ಸುದರ್ಶನ್, , ಜಿಲ್ಲಾ ಅಂಗಾಂಗದಾನ ಸಂಯೋಜಕರಾದ ಲವೀನಾ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 30 ಮಂದಿ ಗೃಹರಕ್ಷಕರು ಅಭಿಯಾನದಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.

Edited By : PublicNext Desk
Kshetra Samachara

Kshetra Samachara

27/08/2022 07:39 am

Cinque Terre

1.19 K

Cinque Terre

0

ಸಂಬಂಧಿತ ಸುದ್ದಿ