ಮಂಗಳೂರು: ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣ ಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್‌ವೆಲ್‌ನ ತೋಟಗಾರಿಕಾ ಇಲಾಖೆಯ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿದರು.
ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದ ರು. ಸಮಾರಂಭದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್ ಆರ್.ನಾಯ್ಕ್ , ದ.ಕ ಪಶು ಸಂಗೋಪನಾ ಇಲಾಖಾ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪಾಲಿಸಿಯನ್ನು ರೈತರಿಗೆ ಮತ್ತು ತರಕಾರಿ ಗಿಡಗಳನ್ನು ಪತ್ರಕರ್ತರಿಗೆ ಸಾಂಕೇತಿಕವಾಗಿ ಅತಿಥಿಗಳು ವಿತರಿಸಿದರು.
ಪತ್ರಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿ ಗಳಿಂದ ಜೇನು ಕೃಷಿ,ಅಣಬೆ ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ , ಮೀನುಗಾ ರಿಕೆ ಬಗ್ಗೆ ಮಾಹಿತಿ ಶಿಬಿರ ನಡೆಯಿತು.
Kshetra Samachara
22/09/2022 03:39 pm