ಉಳಾಯಿಬೆಟ್ಟು:ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಇವರುಗಳ ಮಾರ್ಗದರ್ಶನದಲ್ಲಿ ಸಮಾಜಸೇವಾ ಸಂಘಟನೆಗಳ ಆಶ್ರಯದಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ ಹಾಗೂ ಆಯ್ದ ಸರಕಾರಿ ಸೇವೆಗಳ ಶಿಬಿರವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಉಳಾಯಿಬೆಟ್ಟು ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆದ ಶಿಬಿರದಲ್ಲಿ ಸಮಾಜಮುಖಿ ಸಂಘಟನೆಗಳ ಪದಾಧಿಕಾರಿಗಳು, ಆಯೋಜಕರು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಕೇಶ್ ಶೆಟ್ಟಿ, ಸದಸ್ಯರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
25/09/2022 12:00 pm