ಮುಲ್ಕಿ: ರಾಜ್ಯ ಸರಕಾರದ ಮುಖ್ಯಮಂತ್ರಿಯವರ ಗ್ರಾಮೀಣಾಭಿವೃದ್ಧಿ ಯೋಜನೆಯ ವಿಶೇಷ ಅನುದಾನದ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಕೊಕ್ರಾಣಿ, ಕಕ್ವ, ಬಾನೊಟ್ಟು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ಶೀಲಾನ್ಯಾಸ ಕಾರ್ಯಕ್ರಮ ಮಟ್ಟು ವಿನಲ್ಲಿ ನಡೆಯಿತು.
ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸರಕಾರದ ಧ್ಯೇಯವಾಗಿದ್ದು ಪ್ರಥಮ ಬಾರಿಗೆ ಗ್ರಾಮೀಣ ಪ್ರದೇಶಕ್ಕೆ ಮೂರು ಕೋಟಿಗಳ ಅನುದಾನವನ್ನು ಸರಕಾರ ಒದಗಿಸಿದೆ ಎಂದರು
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ ಮುಲ್ಕಿ ಮೂಡಬಿದ್ರೆ ಹಾಗೂ ಪಾಪು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾಗಿದ್ದು ಅಭಿವೃದ್ಧಿ ಮೂಲಕ ಸಮಾನತೆ ಕಲ್ಪಿಸುತ್ತಿರುವ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ ವಹಿಸಿದ್ದರು.
ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಶ್ ಶೆಟ್ಟಿ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಉದಯ ಅಮೀನ್ ಮಟ್ಟು ಸ್ವಾಗತಿಸಿ ನಿರೂಪಿಸಿದರು.
Kshetra Samachara
26/09/2022 07:36 pm