ಮುಲ್ಕಿ:ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲಕಾಡಿ ಕುಂಜಾರಗಿರಿ ದೇವಸ್ಥಾನದ ಬಳಿಯಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ ಸರಕಾರ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುತ್ತಿದೆ ಎಂದರು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯ ಜಯಕುಮಾರ್, ವೇ.ಮೂ.ವಾದಿರಾಜ ಉಪಾಧ್ಯಾಯ, ಮುಲ್ಕಿ ನ ಪಂ ನ ಮಾಜಿ ಅಧ್ಯಕ್ಷ ಸುನೀಲ್ ಆಳ್ವ, ಮಹಿಳಾ ಮಂಡಳಿಯ ಅಧ್ಯಕ್ಷೆ ಪುಷ್ಪ ಮಡಿವಾಳ್ತಿ, ಮಹಿಳಾ ಮಂಡಳಿಯ ಸದಸ್ಯರು, ಕುಂಜಾರಗಿರಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಕಾಂತ್ ಭಟ್, ಗಂಗಾಧರ್ ಶೆಟ್ಟಿ, ವಿಜಯ ರೈತ ಸೇವಾ ಸಂಘದ ಅಧ್ಯಕ್ಷ ರಂಗನಾಥ್ ಶೆಟ್ಟಿ, ಸುಧಾಕರ ಶೆಟ್ಟಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
06/10/2022 09:25 am