ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಬೃಹತ್ ಕರ ಸೇವೆ ನಡೆಯಿತು.
ಕರಸೇವೆಯಲ್ಲಿ ಊರ-ಪರವೂರ ಭಕ್ತರು, ಚೌಕಗ್ರಾಮದ ಸಂಘ-ಸಂಸ್ಥೆಗಳ ಸದಸ್ಯರು, ಮಹಿಳೆಯರು, ಮಕ್ಕಳು ಸೇರಿ ಸುಮಾರು ನೂರಾರು ಸ್ವಯಂ ಸೇವಕರು ಭಾಗವಹಿಸಿ, ದೇವಸ್ಥಾನದ ಹೊರಾಂಗಣದ ಕಾಂಕ್ರೀಟ್ ನೆಲವನ್ನು ಅಗೆದು ತೆಗೆಯುವ ಕಾರ್ಯ ನಡೆಸಿದರು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/10/2022 02:34 pm