ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನವನ್ನು ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ.
ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬ್ರಹ್ಮಕಲಶೋತ್ಸವ ನಡೆದ ಬಳಿಕ ಕೊರೋನಾ ಹಿನ್ನೆಲೆಯಲ್ಲಿ ಜೀಣೋದ್ಧಾರದ ಬಳಿಕ ನಡೆಯಬೇಕಿದ್ದ ದೃಢಕಲಶ ಬಾಕಿ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
Kshetra Samachara
04/12/2020 11:26 am