ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.

ಡಿ. 13, 14ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಕೋವಿಡ್ ಪಾಲಿಸಿಕೊಂಡು ಸರಳ ಕಾರ್ಯಕ್ರಮ ನಡೆಯಲಿದ್ದು, ಡಿ.10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭಗೊಂಡು, ಡಿ.14ರಂದು ಗೌರಿ ಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.

ಡಿ.10 ರಿಂದ ಡಿ.14ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ವಿಹಾರ, ಉತ್ಸವ ನಡೆಯಲಿದೆ. ಈ ಐದು ದಿನಗಳಲ್ಲೂ ರಾತ್ರಿ 9ಕ್ಕೆ ನಾನಾ ಉತ್ಸವ ನಡೆಯುತ್ತದೆ. ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿಮಾರುಕಟ್ಟೆ ಉತ್ಸವ ಹಾಗೂ ಗೌರಿ ಮಾರುಕಟ್ಟೆ ಉತ್ಸವ ನೆರವೇರಲಿದೆ. ಡಿ.15 ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಯಶಸ್ವಿ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ಧತೆ ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥ ಬೀದಿ, ರಾಜ ಬೀದಿ, ದೇವಸ್ಥಾನ, ಬೀಡು, 'ಅನ್ನಪೂರ್ಣ' ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.

ವಸ್ತು ಪ್ರದರ್ಶನ ಹಾಗೂ ಬೀದಿ ಬದಿ ಅಂಗಡಿಗಳು ಇರುವುದಿಲ್ಲ. ಕೋವಿಡ್ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ನಡೆಯುವ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ವೀಕ್ಷಿಸಲು ಅವಕಾಶವಿದೆ.

’ಶ್ರೀ ಕ್ಷೇತ್ರ ಧರ್ಮಸ್ಥಳ’ ಯೂಟ್ಯೂಬ್, ಫೇಸ್‌ಬುಕ್ ಹಾಗೂ ಇನ್ನಿತರ ವಾಹಿನಿಗಳಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆ ಸಮಿತಿ ವತಿಯಿಂದ ಇಂದು ಸಂಜೆ ಉಜಿರೆಯಿಂದ ಧರ್ಮಸ್ಥಳದ ವರೆಗೆ 8ನೇ ವರ್ಷದ ಪಾದಯಾತ್ರೆ ನಡೆಯಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಭಾಗವಹಿಸುವ ಪಾದಯಾತ್ರಿಗಳು ಸರಕಾರದ ಎಲ್ಲ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾದಯಾತ್ರೆ ಸಮಿತಿ ತಿಳಿಸಿದೆ.

Edited By : Nagaraj Tulugeri
Kshetra Samachara

Kshetra Samachara

10/12/2020 08:45 pm

Cinque Terre

8.47 K

Cinque Terre

0

ಸಂಬಂಧಿತ ಸುದ್ದಿ