ಮೂಡುಬಿದಿರೆ: ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಫೇಸ್‍ಬುಕ್ ಪುಟದ ಸಹಭಾಗಿತ್ವದೊಂದಿಗೆ ಡಿ.20ರಂದು ನಡೆಯುವ ಅಂತಾರಾಷ್ಟ್ರೀಯ ಮಟ್ಟದ "ಜಿನ ಸಮ್ಮಿಲನ" ದ ಆಮಂತ್ರಣ ಪತ್ರಿಕೆಯನ್ನುಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಜಗದ್ಗುರು ಸ್ವಸ್ತಿ ಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಗವಾನ್ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ಇಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಬಿಡುಗಡೆಗೊಳಿಸಿದರು.
ಎಂ.ಸಿ.ಎಸ್. ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಜೈನ್ ಮಿಲನ್ ವಲಯ - 8ರ ನಿರ್ದೇಶಕ ಜಯರಾಜ್ ಕಂಬಳಿ, ಮೂಡುಬಿದಿರೆ ಜೈನ್ ಮಿಲನ್ ಅಧ್ಯಕ್ಷೆ , ವಕೀಲೆ ಶ್ವೇತಾ ಜೈನ್, ಕಾರ್ಕಳ ಯುವ ಜೈನ್ ಮಿಲನ್ ಕಾರ್ಯದರ್ಶಿ ಸಮೃದ್ಧ್ ಜೈನ್ ಹಾಗೂ ಬೆಳಗಾಂ ಉದ್ಯಮಿ ಸುಬೋಧ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು
Kshetra Samachara
18/12/2020 11:33 am