ಮುಲ್ಕಿ: ಪ್ರವಾಸೋದ್ಯಮ ಇಲಾಖೆಯಲ್ಲಿ ಈಗಾಗಲೇ ಗುರುತಿಸಿರುವ 319 ಪ್ರವಾಸಿ ತಾಣಗಳನ್ನು ಹೊರತುಪಡಿಸಿ ಹೊಸ ಪ್ರವಾಸಿ ತಾಣಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಪ್ರವಾಸಿ ತಾಣಗಳ ಇತಿಹಾಸ ಹಾಗೂ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಇಲಾಖೆಯಿಂದ ಮಾಹಿತಿ ಕೋರಲಾಗಿತ್ತು. ಅದರಂತೆ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ಒಳಗೊಂಡಂತೆ ದ.ಕ. ಜಿಲ್ಲೆಯಲ್ಲಿ 36 ಪ್ರವಾಸಿ ತಾಣಗಳನ್ನು ಗುರುತಿಸಿ ಹೆಚ್ಚುವರಿ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿಗಳ ಅವಗಾಹನೆಗೆ ಸಲ್ಲಿಸಲಾಗಿದೆ.
ಮುಲ್ಕಿಯ ಶಾರದಾ ಇನ್ ಫ್ರಾ ಡಿಸೈನ್ (ಇಂಡಿಯಾ) ಫ್ರಾ ಲಿಮಿಟೆಡ್ ಆಡಳಿತ ನಿರ್ದೇಶಕ ಜೀವನ್ ಕೆ. ಶೆಟ್ಟಿಯವರು ಮುಲ್ಕಿಯ ಬಪ್ಪನಾಡು ದೇವಸ್ಥಾನವನ್ನು ಪ್ರವಾಸೋದ್ಯಮ ತಾಣವನ್ನಾಗಿ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿ, ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.
ಇದೀಗ ಪ್ರವಾಸೋದ್ಯಮ ಇಲಾಖೆಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ಸೇರ್ಪಡೆಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಪತ್ರ ರವಾನೆಯಾಗಿದೆ.
Kshetra Samachara
21/01/2021 09:55 pm