ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಸಂಗ್ರಹಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಪ್ರಯುಕ್ತ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಯುತ್ತಿದೆ. ಅದರಂತೆ ನಳಿನ್ ಕುಮಾರ್ ಕಟೀಲು ಅವರು
ಮಂಗಳೂರಿನ ಸಂಘನಿಕೇತನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸುನಿಲ್ ಆಚಾರ್ ಮೂಲಕ 1 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಉಪಸ್ಥಿತರಿದ್ದರು.
Kshetra Samachara
22/01/2021 06:39 pm