ಬಜಪೆ:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಹಾಗೂ ಅವರ ಪತ್ನಿ ಶುಕ್ರವಾರ ಭೇಟಿ ನೀಡಿದರು. ದೇವಸ್ಥಾನದ ಸ್ವಚ್ಛತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಗೋಶಾಲೆಯ ದನಗಳಿಗೆ ತಿನಿಸು ನೀಡಿ ಖುಷಿಪಟ್ಟರು.
ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿಯ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ, ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ವೆಂಕಟೇಶಪ್ರಸಾದ್ ರಿಗೆ ಕ್ಷೇತ್ರದ ಕೃತಿಗಳನ್ನು ನೀಡಿ ಗೌರವಿಸಿದರು. ಈ ವೇಳೆ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
Kshetra Samachara
07/05/2022 08:15 am