ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಡೇಶ್ವಾಲ್ಯದ ಜಯಲಕ್ಷ್ಮೀ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ: ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಿವಾಸಿ ಜಯಲಕ್ಷ್ಮೀ ಜಿ. ಅವರು 2017ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಡೇಶ್ವಾಲ್ಯ ಪೆರ್ಲಾಪು ಗಾಣದಕೊಟ್ಯ ನಿವಾಸಿ ದಿ. ವಿಶ್ವನಾಥ ಸಪಲ್ಯ-ರೇವತಿ ದಂಪತಿ ಪುತ್ರಿ. ಇವರು ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸೆಲ್ಸಿ ಪೂರ್ಣಗೊಳಿಸಿದ ಬಳಿಕ ಆಳ್ವಾಸ್ ನಲ್ಲಿ ಪಿಯು, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನೂ ಪೂರ್ಣಗೊಳಿಸಿದ್ದು, ಕೋಚ್ ಪ್ರವೀಣ್ ಕುಮಾರ್ ಅವರಿಂದ ಬಾಲ್ ಬ್ಯಾಡ್ಮಿಂಟನ್ ಕಲಿತು ಕರ್ನಾಟಕ ತಂಡದ ನಾಯಕಿಯಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ನಾಲ್ಕು ಬಾರಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈಕೆಯ ಸಾಧನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿನಂದನೆ ಸಲ್ಲಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

01/11/2020 08:33 pm

Cinque Terre

3.03 K

Cinque Terre

0

ಸಂಬಂಧಿತ ಸುದ್ದಿ