ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ : ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಗ್ರಾಮೀಣ ಪ್ರತಿಭೆ ರಮ್ಯಶ್ರೀ ಜೈನ್

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಅಸ್ಸಾಂನ ಗುವಾಹಟಿಯಲ್ಲಿ ಮಂಗಳವಾರ ನಡೆದ 36ನೇ ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಜಾವೆಲಿನ್ (ಈಟಿ) ಎಸೆತದಲ್ಲಿ ಪ್ರಥಮ ಸ್ಥಾನ ಗೆದ್ದು, ಚಿನ್ನದ ಪದಕ ಗಳಿಸಿದ್ದಾರೆ.

ಈಕೆ ಸಂಗಬೆಟ್ಟು ಗ್ರಾಮದ ಮಾಲ್ದಾಡು ನಿವಾಸಿ ರವೀಂದ್ರ ಜೈನ್ ಮತ್ತು ಪದ್ಮಶ್ರೀ ಜೈನ್ ದಂಪತಿ ಪುತ್ರಿ. ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ನಮ್ಮ ಶಿಕ್ಷಣ ಸಂಸ್ಥೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಸಂಸ್ಥಾಪಕ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/02/2021 02:54 pm

Cinque Terre

5.81 K

Cinque Terre

3

ಸಂಬಂಧಿತ ಸುದ್ದಿ