ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯ ಮಟ್ಟದ ಕರಾಟೆಯಲ್ಲಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಗೆ ಹಲವು ಪ್ರಶಸ್ತಿ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರಿನ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ನ ಕರಾಟೆ ತರಗತಿಯ ವಿದ್ಯಾರ್ಥಿಗಳು ಮಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ಜರುಗಿದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅನೇಕ ಪದಕ ಗೆದ್ದಿದ್ದಾರೆ.

ತೃಶಾ ಅಮೀನ್ 2 ಪದಕಗಳೊಂದಿಗೆ ಪ್ರಥಮ ಸ್ಥಾನ, ಶ್ರವಣ್ 2 ಪದಕಗಳೊಂದಿಗೆ ಪ್ರಥಮ ಸ್ಥಾನ, ವೃಶಾಂಕ್ ಸುವರ್ಣ 1 ಪದಕದೊಂದಿಗೆ ಪ್ರಥಮ ಸ್ಥಾನ, ಅಭಯ್ ಕೋಟ್ಯಾನ್ 1 ಪದಕದೊಂದಿಗೆ ದ್ವಿತೀಯ ಸ್ಥಾನ, ವೈಭವ್ 1 ಪದಕದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳು ಸಂಸ್ಥೆಯ ಸದಸ್ಯ ಮತ್ತು ಕರಾಟೆ ತರಬೇತುದಾರ ಸುಶಾನ್ ದೇವಾಡಿಗ ಅವರ ಶಿಷ್ಯರಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

26/12/2020 10:40 pm

Cinque Terre

2.51 K

Cinque Terre

0

ಸಂಬಂಧಿತ ಸುದ್ದಿ