ಮುಲ್ಕಿ:ಮುಲ್ಕಿ ವಿಜಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನಾ ಸಮಾರಂಭ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಗರಿ ಎಂಟರ್ಪ್ರೈಸಸ್ ನ ಮಾಲಕರಾದ ಅಗರಿ ರಾಘವೇಂದ್ರ ರಾವ್ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುವುದರ ಜೊತೆಗೆ ಜೀವನದಲ್ಲಿ ಶಿಸ್ತಿನ ಪಾಠ, ನಾಯಕತ್ವ ಗುಣ,ಸೇವಾ ಮನೋಭಾವನೆಗಳನ್ನು ಬೆಳೆಸಿಕೊಳ್ಳಬಹುದು ಹಾಗೂ ವ್ಯಕ್ತಿತ್ವ ವಿಕಸನಗೊಳ್ಳುವುದರ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀಮಣಿ ಶೆಟ್ಟಿ, ಮಾತನಾಡಿದರು
ಮುಖ್ಯ ಅತಿಥಿಗಳಾಗಿ ಮುಲ್ಕಿ ನ. ಪಂ. ಮುಖ್ಯಾಧಿಕಾರಿ ಚಂದ್ರಪೂಜಾರಿ, ವಿಜಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಮೀದ ಬೇಗಂ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಸಂಪತ್ ಕುಮಾರ್,ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಜಿತೇಂದ್ರ ವಿ ರಾವ್ ,. ಕಾರ್ಯದರ್ಶಿ ಗಳಾದ ಸಹನಾ , ಕೃಷ್ಣ ಭಟ್ ಕು. ಮೋನಿಷಾ ಮತ್ತಿತರರು ಉಪಸ್ಥಿತರಿದ್ದರು
Kshetra Samachara
17/01/2022 06:11 pm