ಮುಲ್ಕಿಕ್ರೀಡೆ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಅವರು ಕೆಮ್ರಾಲ್ ಪಂಜದ ಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಆಟದ ಮೈದಾನದಲ್ಲಿ ಹಳೆಯಂಗಡಿ ವಿದ್ಯಾವಿನಾಯಕ ಯುವಕ ಮಂಡಲದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾ ಕೃಷ್ಣಪ್ಪ ಅಧ್ಯಕ್ಷತೆವಹಿಸಿದ್ದರು.
ಕೆಮ್ರಾಲ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್. ಡಿ. ಅಜ್ಜಯ್ಯ , ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಹಾಸ, ಕೊಯಿಕುಡೆ ಹರಿಪಾದ ಹರಿಸೋಟ್ಸ್ ಕ್ಲಬ್ ಅಧ್ಯಕ್ಷ ರವಿಚಂದ್ರ , ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷ ಸುಧಾಕರ್, ವಿದ್ಯಾವಿನಾಯಕ ಯುವತಿ ಮಂಡಲದ ಅಧ್ಯಕ್ಷೆ ರಕ್ಷಿತಾ, ಶ್ಮಹಿಳಾ ಮಂಡಲದ ಅಧ್ಯಕ್ಷೆ ರೇಷ್ಮಾ ಯುವಕ ಮಂಡಲದ ಅಧ್ಯಕ್ಷ ಯತೀಶ್ ಕೋಟ್ಯಾನ್ ಸ್ವಾಗತಿಸಿದರು. ರಾಮದಾಸ್ ಕಾರ್ಯಕ್ರಮ ನಿರೂಪಿಸಿದರು. ಸ್ಟ್ಯಾನೀ ಡಿ ಕೊಸ್ತ ವಂದಿಸಿದರು. ಬಳಿಕ ಕ್ರೀಡಾಕೂಟ ನಡೆಯಿತು
Kshetra Samachara
30/01/2022 03:11 pm