ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಆಳ್ವಾಸ್ ಕಾಲೇಜಿನ ಜಂಟಿ ಸಹಯೋಗದಲ್ಲಿ ಮೂಡಬಿದ್ರಿಯ ಸ್ಕೌಟ್ ಮತ್ತು ಗೈಡ್ಸ್ ಕನ್ನಡಭವನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಹಿಳೆಯರ 87 ಕೆಜಿ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ನಿಶ್ಮಿತಾ ಜಯ ಪೂಜಾರಿ ಚಿನ್ನದ ಪದಕ ಪಡೆದಿದ್ದಾರೆ.
ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ಜಯ ಪೂಜಾರಿಯವರ ಪುತ್ರಿಯಾಗಿರುವ ನಿಶ್ಮಿತಾ ತರಬೇತುದಾರ ಪ್ರಮೋದ್ ಶೆಟ್ಟಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.
ಅಲ್ಲದೇ ಉಡುಪಿಯ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕಳೆದ ಶುಕ್ರವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ 84 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
Kshetra Samachara
03/08/2022 01:04 pm