ಪುತ್ತೂರು: ಈಜು ಸ್ಪರ್ಧೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪುತ್ತೂರು ಅಕ್ವೆಟಿಕ್ ಕ್ಲಬ್ ಆಗಸ್ಟ್ 28 ರಂದ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಕ್ಲಬ್ ನ ಅಧ್ಯಕ್ಷೆ ದಿವ್ಯ ಅನಿಲ್ ರೈ ತಿಳಿಸಿದರು.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು 7 ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಪುತ್ತೂರು ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಈ ಸ್ಪರ್ಧೆ ನಡೆಯಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ ಎಂದರು.
ರಾಜ್ಯದಲ್ಲೇ ಮೊದಲ ಬಾರಿಗೆ ಅಂತರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸ್ಕಿನ್ಸ್ ಎನ್ನುವ ವಿನೂತನ ಸ್ಪರ್ಧೆಯನ್ನೂ ಈ ಕಾರ್ಯಕ್ರಮದಲ್ಲಿ ಜೋಡಿಸಿಕೊಳ್ಳಲಾಗಿದೆ ಎಂದು ಕ್ಲಬ್ ನ ಗೌರವಾಧ್ಯಕ್ಷ ಪಾರ್ಥ ವಾರಣಾಸಿ ತಿಳಿಸಿದರು.
ಪುತ್ತೂರು ಅಕ್ವೇಟಿಕ್ ಕ್ಲಬ್ ಅಂತರರಾಷ್ಟ್ರೀಯ ಮಟ್ಟದ ಈಜುಪಟುಗಳನ್ನು ನೀಡಿದ್ದು, ಕ್ಲಬ್ ನ ವಿದ್ಯಾರ್ಥಿಗಳು 2300 ಕ್ಕೂ ಮಿಕ್ಕಿದ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸುವ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
Kshetra Samachara
26/08/2022 12:36 pm