ಮುಲ್ಕಿ:ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯರಾದ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ತೋಕೂರು ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ಆಚರಿಸಲಾಯಿತು.
ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಸಂದರ್ಭ ತೋಕೂರು ರೋಟರಿ ಸಮುದಾಯ ದಳದ ಅದ್ಯಕ್ಷ ವಾಮನ. ಎಸ್. ದೇವಾಡಿಗ ರವರು ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ ಕ್ರೀಡೆಯಿಂದ ದೇಹವು ಉತ್ತಮ ವ್ಯಾಯಾಮವನ್ನು ಪಡೆಯುತ್ತದೆ. ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಛಲಬಿಡದೆ ಸಾಧನೆ ಮಾಡಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವ ಶಕ್ತಿ ಇರುತ್ತದೆ" ಎಂದರು.
ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಸ್ಪೋರ್ಟ್ಸ್ ಕ್ಲಬ್ ನ ಅದ್ಯಕ್ಷ ಸಂತೋಷ್ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಸುನಿಲ್ ದೇವಾಡಿಗ, ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಸ್ಪೋರ್ಟ್ಸ್ ಕ್ಲಬ್ ನ ಅದ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿದರು,ಜೊತೆ ಕಾರ್ಯದರ್ಶಿ ಶ್ರೀ ಗೌತಮ್ ಬೆಲ್ಚೆಡ್ ವಂದಿಸಿದರು.
ಕಾರ್ಯಧ್ಯಕ್ಷ ಸುರೇಶ್ ಶೆಟ್ಟಿ ನಿರೂಪಿಸಿದರು.ಬಳಿಕ 16 ತಂಡಗಳನ್ನು ಒಳಗೊಂಡ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಿತು.
Kshetra Samachara
01/09/2022 08:00 pm