ಕಟೀಲು: ಬಾಲಕರ ಹಾಗೂ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿತು. ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲೂ ಕಟೀಲು ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತು. ಬಾಲಕರ ಕಬ್ಬಡಿ ಪಂದ್ಯಾಟದಲ್ಲಿ ಕಟೀಲು ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿತು.
ಉದ್ಘಾಟನೆ ಪದವಿ ಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಮಂಗಳೂರು ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಕಟೀಲು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಮೂಲ್ಕಿ ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಟೀಲು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು.
ಸನತ್ ಕುಮಾರ್ ಶೆಟ್ಟಿ. ಕೆ.ವಾಸುದೇವ ಆಸ್ರಣ್ಣ ಕ್ರೀಡಾಕೂಟ ಉದ್ಘಾಟಿಸಿದರು. ಶ್ರೀಹರಿನಾರಾಯಣದಾಸ ಆಸ್ರಣ್ಣ, ಈಶ್ವರ್ ಕಟೀಲ್, ಅರುಣ ಡಿ ಸೋಜ, ಅಲ್ವಿನ್ ಮಿರಾಂಡ, ಮೋಹನ್ ರಾವ್. ಕಾಲೇಜಿನ ಪ್ರಾಂಶುಪಾಲರಾದ ಎನ್ ಕುಸುಮಾವತಿ ವೇದಿಕೆಯಲ್ಲಿದ್ದರು.
Kshetra Samachara
08/09/2022 06:11 am