ಮಂಗಳೂರು: 220/110/11 ಕೆವಿ ಎಸ್.ಆರ್.ಎಸ್. ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೂಳೂರು ಹಾಗೂ ಚಿಲಿಂಬಿ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 25ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ನಾಗರಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
24/05/2022 06:42 pm