ಮಂಗಳೂರು: 33/11 ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.29ರ ಬೆಳಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ ಸ್ಟ್ರೀಟ್, ದಯಾನಂದ ಪೈ ಕಾಲೇಜು, ಮಹಾಮಾಯಿ ದೇವಸ್ಥಾನ ರಸ್ತೆ, ಕಾರ್ಪೊರೇಶನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಬಿಜೈ
110/33/11 ಕೆ.ವಿ. ಬಿಜೈ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಬಿಜೈ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಜೂ.29ರ ಬೆಳಗ್ಗೆ 10 ರಿಂದ 2ರವರೆಗೆ ನೋಡುಲೇನ್, ಬಟ್ಟಗುಡ್ಡ, ರಾಮಕೃಷ್ಣ ಭಜನಾ ಮಂದಿರ, ಬಿಜೈ ಮ್ಯೂಸಿಯಂ, ಬಿಜೈ 5ನೇ ಕ್ರಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಮೂಡುಬಿದಿರೆ:
110/11 ಕೆ.ವಿ ಮೂಡಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 110/11 ಕೆ.ವಿ. ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.29ರ ಬೆಳಗ್ಗೆ 10 ರಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರ್ ಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವಣ ಕಜೆ, ಆನೆಗುಡ್ಡ, ಜೋಗೊಟ್ಟು, ವಾಲ್ವಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಮರಕಡ:
220/110/11 ಕೆ.ವಿ ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮರಕಡ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.29ರ ಬೆಳಗ್ಗೆ 10 ರಿಂದ 4ರವರೆಗೆ ಕೆಂಜಾರು, ಕರಂಬಾರು, ಅಂತೋನಿಕಟ್ಟೆ, ಪೊರ್ಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಮನವಿ ಮಾಡಿದೆ.
Kshetra Samachara
28/06/2022 11:25 pm