ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ಇಬ್ಬರೂ ಸ್ಥಳದಲ್ಲಿಯೇ ದುರ್ಮರಣ

ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಮತ್ತು ಹಿಂಬದಿಯ ಸವಾರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ನಡೆದಿದೆ.

50 ವರ್ಷದ ಮಹೇಶ್, 55 ವರ್ಷದ ಮಹದೇವಪ್ಪ ಮೃತ ದುರ್ಧೈವಿಗಳಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗೋಠರ ಗ್ರಾಮದವರಾಗಿದ್ದು, ಇವರು ಮೈಸೂರಿನಿಂದ ಗಾರೆ ಕೆಲಸ ಮುಗಿಸಿಕೊಂಡು ಬರುವಾಗ ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ಎದುರುಗಡೆಯಿಂದ ಬಂದ ಕಾರಿನ ಚಾಲಕನ ಅತಿವೇಗ ಹಾಗೂ ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

19/09/2022 03:39 pm

Cinque Terre

30.53 K

Cinque Terre

0

ಸಂಬಂಧಿತ ಸುದ್ದಿ