", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/378325-1736342642-19.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಮೈಸೂರಿನ...Read more" } ", "keywords": ",Mysore,Crime", "url": "https://publicnext.com/article/nid/Mysore/Crime" } ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ, ಮಾರಕಾಸ್ತ್ರಗಳಿಂದ ಹಲ್ಲೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ, ಮಾರಕಾಸ್ತ್ರಗಳಿಂದ ಹಲ್ಲೆ

ಮೈಸೂರು: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಮೈಸೂರಿನ ಸಿದ್ದರಾಮಯ್ಯ ನಿವಾಸದ ತಿಬ್ಬಾದೇವಿ ಸರ್ಕಲ್ ಬಳಿ ನಡೆದಿದೆ.

ಕೆಜಿ ಕೊಪ್ಪಲ್ ನಿವಾಸಿ ರವಿಕುಮಾರ್ ಮತ್ತು ಶಿವಕುಮಾರ್ ಎಂಬ ಯುವಕರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ಮಾಡಲಾಗಿದೆ. ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ ಮತ್ತು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆಯಲ್ಲಿ ರವಿಕುಮಾರ್, ಶಿವಕುಮಾರ್, ಎಂಬುವವರಿಗೆ ಬೆನ್ನು ಮತ್ತು ಪಕ್ಕೆಲುಬಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ರೇಣುಕಾ ಪ್ರಸಾದ್, ಗುರು, ಮಣಿ, ಪವನ್, ಕುಮಾರಸ್ವಾಮಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ.

ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Edited By : Somashekar
PublicNext

PublicNext

08/01/2025 06:54 pm

Cinque Terre

46.91 K

Cinque Terre

0