#ನಂಜನಗೂಡು: ತಾಲೂಕಿನ ದೊಡ್ಡ ಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ವ್ಯಕ್ತಿಯನ್ನು ದೊಡ್ಡಕವಲಂದೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಯ ಗ್ರಾಮದ 33 ವರ್ಷದ ಅರ್ಜುನ್ ಬಂಧಿತ ವ್ಯಕ್ತಿಯಾಗಿದ್ದಾನೆ. ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಮಾಡಿದ್ದರು. ಅರ್ಜುನ್ ಎಂಬ ವ್ಯಕ್ತಿಯೂ ರಾತ್ರಿಯ ಸಮಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನ್ನಡಕವನ್ನು ತೆಗೆದು ಹಾಕಿರುವುದು ನಾಲ್ಕು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಇದನ್ನು ಆಧರಿಸಿ ರಾಷ್ಟ್ರ ನಾಯಕರಿಗೆ ಅಪಮಾನ ಮಾಡಿದ ವ್ಯಕ್ತಿಯನ್ನು ಬಂಧಿಸಬೇಕು ಎಂದು ದೊಡ್ಡಕವಲಂದೆ ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದರು. ಇದರಿಂದ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಿಎಸ್ಐ ಮಹೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಪಮಾನ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
13/10/2022 01:30 pm