ಮೈಸೂರು: ಜಿಂಕೆ ಬೇಟೆಯಾಡಿ ಬೈಕ್‌ನಲ್ಲಿ ಜಿಂಕೆಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಹೆಚ್.ಡಿ ಕೋಟೆ ತಾಲೂಕಿನ ಬಸಾಪುರ ಗ್ರಾಮದ ನಿವಾಸಿಗಳಾದ ಪ್ರಸಾದ್ ಮತ್ತು ಮುನಿಯಪ್ಪ ಬಂಧಿತ ಆರೋಪಿಗಳಾಗಿದ್ದು ಇವರಿಂದ ಸುಮಾರು 8 ಕೆ.ಜಿ ಜಿಂಕೆ ಮಾಂಸದ ಸಮೇತ ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನಿತರ ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿಗಳ ತಲಾಷ್ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎನ್.ಬೇಗೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
PublicNext
11/10/2022 04:59 pm