ಮೈಸೂರು: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನ ಮೇಲೆ ಚಿರತೆ ದಾಳಿ ನೆಡೆಸಿದ ಘಟನೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೆಚ್.ಡಿ ಕೋಟೆ ತಾಲ್ಲೂಕಿನ ಬೀರಂಬಳ್ಳಿ ಜಕ್ಕಳ್ಳಿ ಕಾಲೋನಿಯ ಮಹದೇವ ಚಿರತೆ ದಾಳಿಗೆ ತೀವ್ರವಾಗಿ ಗಾಯಗೊಂಡವರು. ಮಹದೇವ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಚಿರತೆ ಹಠಾತ್ ದಾಳಿ ನಡೆಸಿದೆ. ಇದರಿಂದಾಗಿ ದಿಗ್ಬ್ರಾಂತರಾದ ಮಹದೇವ ಅವರು ಜೊರಾಗಿ ಚೀರಾಟ ನೆಡೆಸಿದ್ದಾರೆ. ಇದರಿಂದ ಚಿರತೆ ಸ್ಥಳದಿಂದ ಪರಾರಿಯಾಗಿದ್ದು, ಮಹದೇವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹದೇವು ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದು, ದೇಹದ ಇನ್ನಿತರ ಕಡೆಗಳಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಎಚ್.ಡಿ.ಕೋಟೆ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸುವ ಸಾಧ್ಯತೆ ಇದೆ. ಈ ವಿಚಾರ ತಿಳಿದಿದ್ದರೂ ಘಟನಾ ಸ್ಥಳ ಇರಲಿ ಆಸ್ಪತ್ರೆಗೂ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
12/10/2022 11:59 am