ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಪರಭಾರೆ ಮಾಡುತ್ತಿದ್ದ ಗ್ಯಾಂಗ್ ಅಂದರ್

ಮೈಸೂರು: ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳ ಪರಭಾರೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿಗಳ ನಕಲಿ ಸೀಲ್, ಸಿಗ್ನೇಚರ್ ಪತ್ತೆಯಾಗಿದೆ. ಅಪಾರ ಪ್ರಮಾಣದ ನಕಲಿ ದಾಖಲಾತಿ ಪತ್ತೆ ಸಿಕ್ಕಿದೆ. ಮುಡಾ, ಪಾಲಿಕೆ ಸೇರಿ‌ ಸರ್ಕಾರಿ ಅಧಿಕಾರಿಗಳ ದಾಖಲಾತಿಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಭಾರೀ ವಂಚಕರ ಜಾಲ ಬಯಲಾಗಿದೆ. ಯಾರದೋ ಆಸ್ತಿಯನ್ನು ಮತ್ಯಾರಿಗೋ ಮಾರಾಟ ಮಾಡುತ್ತಿದ್ದ ಜಾಲ ನಗರದಲ್ಲಿ ಸಿಕ್ಕಿ ಬಿದ್ದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಬ್ಯಾಂಕ್‍ನಲ್ಲಿ ಸಾಲ ಪಡೆಯುತ್ತಿದ್ದ ಈ ಜಾಲದ ಸದಸ್ಯರ ಬಳಿ ವಿವಿಧ ಇಲಾಖೆಗಳು ಹಾಗೂ ಅಧಿಕಾರಿಗಳ ಸೀಲ್‍ಗಳು ಪತ್ತೆಯಾಗಿವೆ.

ನಕಲಿ ಇ-ಸ್ಟ್ಯಾಂಪ್ ಪೇಪರ್‌ಗಳು, ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಮೊಬೈಲ್‌ಗಳ ವಶಕ್ಕೆ ಪಡೆಯಲಾಗಿದೆ. ಈ ವಂಚಕರು ಶಾಸಕರೊಬ್ಬರ ತಂದೆಯ ಆಸ್ತಿಗೇ ನಕಲಿ ಮಾಲೀಕನನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು. ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಕಳೆದ ಜನವರಿಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ರಾಮಕೃಷ್ಣನಗರ ವಿಶ್ವಮಾನವ ಜೋಡಿ ರಸ್ತೆ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್‍ಮೆಂಟ್‌ನ ಕೊಠಡಿ ಸಂಖ್ಯೆ 301ರಲ್ಲಿ ಪ್ರಕರಣದ ಕಿಂಗ್‌ಪಿನ್‌ನನ್ನು ಬಂಧಿಸಲಾಗಿದೆ. ಡಿಸಿಪಿ ಪ್ರದೀಪ್‍ಗುಂಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Edited By : Vijay Kumar
PublicNext

PublicNext

12/09/2022 12:20 pm

Cinque Terre

17.93 K

Cinque Terre

4

ಸಂಬಂಧಿತ ಸುದ್ದಿ