ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಪಿಎಸ್ಐ ವಿರುದ್ದ ಹಲ್ಲೆ ಯತ್ನ, ಅವಾಚ್ಯ ಶಬ್ಧಗಳಿಂದ ನಿಂದನೆ, ಬಿಜೆಪಿ ಮುಖಂಡನ ವಿರುದ್ದ FIR

ಮೈಸೂರು : ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ.

ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬುವವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.

ಯುವದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನ ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ ಐ ಸ್ಮಿತಾ ಮನವಿ ಮಾಡಿದ್ದಾರೆ.

Edited By : Abhishek Kamoji
PublicNext

PublicNext

04/10/2022 05:44 pm

Cinque Terre

12.87 K

Cinque Terre

1

ಸಂಬಂಧಿತ ಸುದ್ದಿ