ಮೈಸೂರು : ಮೈಸೂರು ದಸರಾ ಅಂಗವಾಗಿ ಮೈಸೂರು ಅರಮನೆಯ ಒಳ ಆವರಣದಲ್ಲಿ ಆಯೋಜಿಸಲಾಗಿದ್ದ, ರಂಗೋಲಿ ಸ್ಪರ್ಧೆಯನ್ನು ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಅವರು ಉದ್ಘಾಟಿಸಿದರು. ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ 100 ಕ್ಕೂ ಅಧಿಕ ಮಹಿಳೆಯರು ಭಾಗವಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.
ಈ ವೇಳೆ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಮಹಿಷಾಸುರನ ರೂಪ, ಮೈಸೂರು ದಸರಾ ಅಂಬಾರಿಯನ್ನು ಹೊತ್ತಿರುವ ಆನೆಯ ಚಿತ್ರ, ಬಸವ ಮತ್ತು ಶಿವ, ಲಿಂಗ ಸಮಾನತೆಯನ್ನು ಉತ್ತೇಜಿಸೋಣ ಎಂಬ ವಿಷಯದ ಮೇಲೆ, ಮಹಿಳೆಯ ಮೇಲೆ ಆಗುತ್ತಿರುವ ಅತ್ಯಾಚಾರ ತಡೆಗಟ್ಟುವುದು ಸೇರಿದಂತೆ ಬಣ್ಣದ ಬಣ್ಣದ ರಂಗೋಲಿ ಬಿಡಿಸಿ ಸಂಭ್ರಮಿಸಿದರು. ಅಲ್ಲದೇ ಸ್ಪರ್ಧೆಯಲ್ಲಿ ಮೂರು ಬಹುಮಾನದ ಜೊತೆಗೆ ಮೂರು ಸಮಾಧಾನಕರ ಬಹುಮಾನ ಮತ್ತು ಭಾಗವಹಿಸಿದವರೆಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ಅ.8 ರಂದು ನೀಡಲಾಗುತ್ತಿದೆ.
PublicNext
04/10/2024 07:34 pm