", "articleSection": "Cultural Activity,Education,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1737550081-V7~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ಸಾಂಪ್ರದಾಯಿಕ ಉಡುಪು ತೊಟ್ಟ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಸರ್ಕಾರಿ ಶಾಲಾ ಮಕ್ಕಳು ಸುಗ್ಗಿ ಸಂಭ್ರಮ ಮತ್ತು ನಮ್ಮೂರ ಸಂತೆ ಕಾರ್...Read more" } ", "keywords": ",Mysore,Cultural-Activity,Education,News,Public-News", "url": "https://publicnext.com/article/nid/Mysore/Cultural-Activity/Education/News/Public-News" }
ನಂಜನಗೂಡು: ಸಾಂಪ್ರದಾಯಿಕ ಉಡುಪು ತೊಟ್ಟ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಸರ್ಕಾರಿ ಶಾಲಾ ಮಕ್ಕಳು ಸುಗ್ಗಿ ಸಂಭ್ರಮ ಮತ್ತು ನಮ್ಮೂರ ಸಂತೆ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.
ಹುಸ್ಕೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗಿ ಸಂಭ್ರಮ ಮತ್ತು ನಮ್ಮೂರ ಸಂತೆ ಕಾರ್ಯಕ್ರಮವನ್ನು ದವಸ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮಹೇಶ್ ಉದ್ಘಾಟಿಸಿದರು.
ಶಾಲೆಯ ಅಂಗಳವನ್ನು ರಂಗೋಲಿ, ಮಣ್ಣಿನ ಮಡಿಕೆ, ಕಬ್ಬಿನ ಜಲ್ಲೆಗಳಿಂದ ಸಿಂಗರಿಸಲಾಗಿತ್ತು. ಶಾಲೆಯ ಆವರಣದಲ್ಲಿ ವಿವಿಧ ಬಗೆಯ ಅಂಗಡಿ ಮೊಳಕೆಗಳನ್ನು ತೆರೆದು, ಹಣ್ಣು, ತರಕಾರಿ, ಚುರುಮುರಿ, ಪಾನಿ ಪುರಿ ವಿವಿಧ ಗ್ರಾಮೀಣ ಆಟಗಳನ್ನು ಆಡಿಸಿ ಮಕ್ಕಳಿಗೆ ಲಾಭ ನಷ್ಟದ ಪರಿಕಲ್ಪನೆಯ ಬಗ್ಗೆ ಅರಿವು ಮೂಡಿಸಲಾಯಿತು.
ಶಾಲೆಗೆ ಆಗಮಿಸಿದ ಪೋಷಕರು ತಮ್ಮ ಮಕ್ಕಳು ತಯಾರಿಸಿದ ವಿವಿಧ ಬಗೆಯ ಖಾದ್ಯಗಳನ್ನು ಸವಿದು ಸಂಭ್ರಮಿಸಿದರು.
ವಿದ್ಯಾರ್ಥಿಗಳು ಸುಗ್ಗಿ ಸಂಭ್ರಮದಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಿಂದೆದ್ದಿದ್ದಾರೆ.
ಉನ್ನತ ವ್ಯಾಸಂಗ ಮಾಡಿ ಕೃಷಿಯನ್ನು ಅವಲಂಬಿಸಿರುವ ರೈತರದ ಚಿಕ್ಕಣ್ಣ, ರಾಘವೇಂದ್ರ, ಮಲ್ಲಿಕಾರ್ಜುನ ರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
Kshetra Samachara
22/01/2025 06:18 pm