ಮೈಸೂರು: ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿಯವರ ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
25/09/2022 02:24 pm