ಮೈಸೂರು: ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.
ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.
ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.
PublicNext
05/10/2022 10:17 am