ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿಗೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಬೆಳಗ್ಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು.

ಈ ವೇಳೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು.ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು.

ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಕ್ರೀಡಾಪಟುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

29/09/2022 01:42 pm

Cinque Terre

660

Cinque Terre

0