ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸಚಿವ ಬಿ.ಸಿ.ನಾಗೇಶ್ ಅವರಿಂದ ಮಕ್ಕಳ ದಸರಾ ಕಾರ್ಯಕ್ರಮದ ಉದ್ಘಾಟನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಏರ್ಪಡಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮತ್ತು ಸಕಾಲ ಇಲಾಖೆ ಸಚಿವರಾದ ಬಿ.ಸಿ.ನಾಗೇಶ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ಈ‌ ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ವೇಷಭೂಷಣ ಸ್ಪರ್ಧೆ, ಪ್ರಬಂಧ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ನೃತ್ಯ ಪ್ರದರ್ಶನ ಸೇರಿದಂತೆ ದೇಸಿ ಆಟಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿಲ್ಲಾಧಿಕಾರಿಯವರಾದ ಡಾ.ಜಿ.ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ಅವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

29/09/2022 06:09 pm

Cinque Terre

29.63 K

Cinque Terre

0

ಸಂಬಂಧಿತ ಸುದ್ದಿ