ಮೈಸೂರು: ದಸರಾಗೆ ಕ್ಷಣಗಣನೆ ಶುರುವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಕಳೆಗುಂದಿದ್ದ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಐತಿಹಾಸಿಕ ಗಳಿಗೆಗೆ ಕೆಲವೇ ಗಂಟೆಗಳು ಬಾಕಿ ಇವೆ.
ಕೊರೊನಾ ಕಾರಣದಿಂದ ಕಳೆದೆರಡು ವರ್ಷ ಕಳೆಗುಂದಿದ್ದದ್ದ ಮೈಸೂರು ದಸರಾ ಈ ಸಲ ವೈಭವೋಪೇತವಾಗಿ ನಡೆಯಲಿದೆ. ನಾಡಹಬ್ಬಕ್ಕೆ ಇಂದು ಚಾಲನೆ ಸಿಗಲಿದ್ದು, ಮೈಸೂರು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಸಲ ದಸರಾ ಉದ್ಘಾಟನೆ ಮಾಡಲಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಬೆಳಿಗ್ಗೆ 9 ಗಂಟೆ 45 ನಿಮಿಷದಿಂದ 10 ಗಂಟೆ 5 ನಿಮಿಷದೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇದಕ್ಕೂ ಮೊದಲು ರಾಷ್ಟ್ರಪತಿಗಳು ಶಕ್ತಿದೇವತೆ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸುತ್ತಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಹಾಜರಿರಲಿದ್ದಾರೆ. ದಸರಾ ಆರಂಭದ ಮೊದಲ ದಿನವಾದ ಇಂದು ದೇವಿಗೆ ಬ್ರಾಹ್ಮಿ ಅಲಂಕಾರ ಮಾಡಿ ವಜ್ರಾಭರಣಗಳಿಂದ ಸಿಂಗರಿಸಲಾಗುತ್ತದೆ.
PublicNext
26/09/2022 08:15 am