ಮೈಸೂರು: ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು.
ಮೈಸೂರು ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೂ ಇದೇ ಸಂಖ್ಯೆಯ ಜನರು ಭೇಟಿ ನೀಡಿದ್ದರು. ಅರಮನೆ ಮಂಡಳಿಯ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 26ರಿಂದ ಅಕ್ಟೋಬರ್ 8ರವರೆಗೆ 300 ವಿದೇಶಿಗರು ಮತ್ತು 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 2.07 ಲಕ್ಷ ಜನರು ಅರಮನೆಗೆ ಭೇಟಿ ನೀಡಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರೀ ನಷ್ಟಕ್ಕೊಳಗಾಗಿದ್ದ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಸಿಕೊಳ್ಳುತ್ತಿದೆ. ಕಳೆದ 2 -ಮೂರು ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ 2 ಲಕ್ಷ ಗಡಿ ದಾಟಿರಲಿಲ್ಲ.
PublicNext
11/10/2022 05:44 pm