ಮೈಸೂರು: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಭಾರತದ ಮೊದಲ ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾದ ನಾಲ್ಕು ತಿಂಗಳ ನಂತರ ಮೈಸೂರಿನಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಮಾದರಿ ವರದಿಯಾಗಿದೆ.
ಜಿಲ್ಲೆಯ ಕೆ ಆರ್ ನಗರದ ಗ್ರಾಮವೊಂದರ 12 ವರ್ಷದ ಬಾಲಕಿಯ ದೇಹದ ಮೇಲೆ ಬೊಬ್ಬೆಗಳು ಕಂಡಿವೆ. ಚಿಕಿತ್ಸೆ ಕೊಡಿಸಿದರೂ ಗುಣವಾಗದ ಹಿನ್ನೆಲೆ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ, ಬಾಲಕಿಯ ದೇಹದಲ್ಲಿ ಬೊಬ್ಬೆಗಳು ಇರುವುದನ್ನು ಗಮನಿಸಿ ಮಂಕಿಪಾಕ್ಸ್ ಗುಣಲಕ್ಷಣ ಕಂಡು ಬಂದಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಮನಕ್ಕೆ ತಂದಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಬಾಲಕಿಯ ಆರೋಗ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಬೆಂಗಳೂರಿನ ಪ್ರಯೋಗಾಲಯಕ್ಕೆ ಪರೀಕ್ಷಾ ಮಾದರಿಗಳನ್ನು ರವಾನಿಸಲಾಗಿದೆ.
PublicNext
13/10/2022 05:31 pm