ಮೈಸೂರು: ಧಾರಾಕಾರವಾಗಿ ಸುರಿಯುತ್ತಿರು ಮಳೆಯಿಂದಾಗಿ ಮಕ್ಕಳು ಶಾಲೆಗೆ ಹೋಗಲು ದಾರಿ ಇಲ್ಲದೆ ಮನೆಯಲ್ಲೇ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿರುವ ಘಟನೆ ನಂಜನಗೂಡು ತಾಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ನಡೆದಿದೆ.
ಮಳೆ ಬಂದಾಗೆಲ್ಲ ಈ ರೀತಿ ಕೆರೆಯಂತಾಗುತ್ತಿದ್ದು ತಿರುಗಾಡುವ ರಸ್ತೆ ಇಲ್ಲದೇ ಪರದಾಡುವ ಸ್ಥಿತಿ ಎದುರಾಗಿದ್ದು, ಜಮೀನುಗಳಿಗೆ ತೆರಳುವ ರಸ್ತೆಯು ನಾಲೆಯ ಪಕ್ಕದಲ್ಲಿ ಹಾದು ಹೋಗುವ ರಸ್ತೆ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದವಸ ದಾನ್ಯಗಳು ಹಾಗೂ ಇನ್ನಿತರ ವಸ್ತುಗಳನ್ನು ತರಲು ತುಂಬಾ ತೊಂದರೆಯಾಗಿದೆ. ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸುವಂತೆ ಹಲವು ಬಾರಿ ಅರ್ಜಿಸಲ್ಲಿಸಿದ್ದೇವೆ. ಅರ್ಜಿಸಲ್ಲಿಸಿ ಮೂರು ತಿಂಗಳು ಕಳೆದರು ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೂಡಲೆ ನಮಗೆ ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸಿ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘದ ಮುಖಂಡ ಶಂಕರೇಗೌಡ ಹಾಗೂ ಶಿವಣ್ಣ ಒತ್ತಾಯಿಸಿದ್ದಾರೆ.
PublicNext
11/10/2022 02:37 pm