ಮೈಸೂರು: ಇದೇ 13ರಿಂದ ಕೆ.ಆರ್ ಪೇಟೆ ಅಂಬಿಗರ ಹಳ್ಳಿ, ಸಂಗಾಪುರ ಜಾಗದಲ್ಲಿ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಭಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ. ಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ.ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. 40 ಜನ ಸಾಧು ಸಂತರು ಭಾಗಿಯಾಗಲಿದ್ದಾರೆ. ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಸಂಗಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೋಪಾಲಯ್ಯ ಹೇಳಿದಾರೆ.
PublicNext
11/10/2022 06:55 pm