", "articleSection": "Law and Order,Business,Agriculture", "image": { "@type": "ImageObject", "url": "https://prod.cdn.publicnext.com/s3fs-public/286525-1737548831-WhatsApp-Image-2025-01-22-at-5.55.39-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ನಂಜನಗೂಡು ತಾಲ್ಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಬೇಕು, ವಿದ್ಯುತ್ ಅಕ್ರಮ ಸಕ್ರಮ ಮಾಡಬೇಕು, ಸೇರಿದಂತೆ ವಿವಿಧ ಬೇಡಿಕೆಗ...Read more" } ", "keywords": "Nanjangud, Microfinance Protests, Farmer Protests, Karnataka Farmers News, Microfinance Harassment, Rural Finance Issues, Farmer Rights, Karnataka Government Policies, Mysuru District News, Indian Farmers Movement.,Mysore,Law-and-Order,Business,Agriculture", "url": "https://publicnext.com/article/nid/Mysore/Law-and-Order/Business/Agriculture" } ನಂಜನಗೂಡು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ನಂಜನಗೂಡು: ನಂಜನಗೂಡು ತಾಲ್ಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಬೇಕು, ವಿದ್ಯುತ್ ಅಕ್ರಮ ಸಕ್ರಮ ಮಾಡಬೇಕು, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಾಲ್ಲೂಕು ಆಡಳಿತ ಭವನದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಬೃಹತ್ ಪ್ರತಿಭಟನೆ ನಡೆಸಿದರು .

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಉಳುಮೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು.

ತಾಲ್ಲೂಕಿನ ರೈತ ಸಂಘದ ನೂರಾರು ಕಾರ್ಯಕರ್ತರು ಸರ್ಕಾರ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ನಂಜನಗೂಡು ತಾಲ್ಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳವನ್ನು ತಪ್ಪಿಸಬೇಕು. ಅಕ್ರಮ ವಿದ್ಯುತ್ ಸಂಪರ್ಕವನ್ನು ಸಕ್ರಮಗೊಳಿಸಬೇಕು.

ಬಗರ್ ಹುಕುಂ ಸಾಗುವಳಿಯನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು. ಕೆರೆಕಟ್ಟೆ ಒತ್ತುವರಿಗಳನ್ನು ತೆರವುಗೊಳಿಸಬೇಕು. ಕಾಡು ಪ್ರಾಣಿಗಳ ಉಪಟಳ ತಡೆಗಟ್ಟಬೇಕು. ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಕಬಿನಿ ಜಲಾಶಯದಿಂದ ಬೇಸಿಗೆ ಬೆಳೆಗಳಿಗೆ ನೀರು ಹರಿಸಬೇಕು. ಹಳೆ ಪದ್ಧತಿ ಬೋಗ್ಯವನ್ನು ಮುಂದುವರಿಸಬೇಕು. ಸೇಲ್ ಅಗ್ರಿಮೆಂಟ್ ವಾಪಸ್ ಪಡೆಯಬೇಕು. ಕಳೆದ ಎಂಟು ತಿಂಗಳು ಗಳಿಂದ ಹಾಲು ಉತ್ಪಾದಕರಿಗೆ ಸಹಾಯಧನ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ದಂಡಾಧಿಕಾರಿ ಶಿವಕುಮಾರ್ ಕಾಸ್ನೂರು ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕಾರ್ಯಧ್ಯಕ್ಷ ಮಹೇಶ್ ಪ್ರಭು, ನೇತ್ರಾವತಿ, ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ ಮಂಕರಯ್ಯ, ಉಪಾಧ್ಯಕ್ಷ ಎಸ್ ಅಂಕಪ್ಪ, ಕೌಲಂದೆ ಪರಮೇಶ್, ಪ್ರೇಮರಾಜ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹೆಜ್ಜೆಗೆ ಪ್ರಕಾಶ್, ಯುವ ಘಟಕದ ಕಾರ್ಯದರ್ಶಿ ಹುಣಸನಾಳು ಮಹೇಶ್, ಚಿಕ್ಕಕವಲಂದೆ ಪ್ರತಾಪ್ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Edited By : Shivu K
PublicNext

PublicNext

22/01/2025 06:11 pm

Cinque Terre

44.66 K

Cinque Terre

0

ಸಂಬಂಧಿತ ಸುದ್ದಿ