ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಈ ಬಾರಿ ಮಹಿಷ ದಸರಾಕ್ಕೆ ಅವಕಾಶವಿಲ್ಲ

ಮೈಸೂರು: ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು , ಪೊಲೀಸರನ್ನು ನಿಯೋಜಿಸಲಾಗಿದೆ.

ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ಬೆಟ್ಟಕ್ಕೆ ತೆರಳುವ ವಾಹನಗಳನ್ನು ಪ್ರವೇಶಕ್ಕೆ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅಲ್ಲಿ ಮಾಡಲಾಗಿದೆ. ಮಹಿಷ ದಸರಾ ಆಚರಿಸಲು ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ' ಎಂದು ಪೊಲೀಸ್ ಆಯುಕ್ತ ಚಂದ್ರಗುಪ್ತ ಪ್ರತಿಕ್ರಿಯಿಸಿದರು.

Edited By : Nagaraj Tulugeri
PublicNext

PublicNext

25/09/2022 01:54 pm

Cinque Terre

25.59 K

Cinque Terre

1

ಸಂಬಂಧಿತ ಸುದ್ದಿ