ಮೈಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮರಿಯೊಂದು ಸಾವನ್ನಪ್ಪಿರುವ ದಾರುಣ ಘಟನೆ ತಿ.ನರಸೀಪುರ ತಾಲ್ಲೂಕಿನ ಹಸುವಟ್ಟಿ ಗ್ರಾಮದ ಬಳಿ ನಡೆದಿದೆ.
ಸುಮಾರು ಆರು ತಿಂಗಳು ವಯಸ್ಸಿನ ಚಿರತೆ ಮರಿ ಇದಾಗಿದ್ದು, ಕಳೆದ ಹಲವು ದಿನಗಳಿಂದ ಸೋಸಲೆ ಗ್ರಾಮದ ಸುತ್ತಮುತ್ತ ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಗಾಬರಿಗೊಂಡ ಗ್ರಾಮಸ್ಥರು ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಚಿರತೆಮರಿ ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಶಶಿಧರ್ ಭೇಟಿ ನೀಡಿದ್ದು, ಚಿರತೆ ಮರಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಒಯ್ದಿದ್ದಾರೆ.
Kshetra Samachara
27/09/2022 02:57 pm